Updated at Sat,24th Feb, 2018 1:26PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಮುಕ್ತ ವಿವಿ ಪದವೀಧರರ ಕೆಎಎಸ್‌ ಕನಸು ಕೊನೆಗೂ ಭಗ್ನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಸೆ. 18ರಂದು ನಡೆಸುತ್ತಿರುವ ಕೆಎಎಸ್‌ ಅಂತಿಮ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪದವಿ ಪಡೆದ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂಬ ಅಭ್ಯರ್ಥಿಗಳ ಕೋರಿಕೆಯನ್ನು ಹೈಕೋರ್ಟ್‌ ತಳ್ಳಿಹಾಕಿದೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಪದವಿ ಪಡೆದ ವಿದ್ಯಾರ್ಥಿಗಳಿಗೆ ಕೆಪಿಎಸ್‌ಸಿ ನಡೆಸುತ್ತಿರುವ ಕೆಎಎಸ್‌ ಅಂತಿಮ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ನಿರಾಕರಿಸಿರುವುದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ರಾಘವೇಂದ್ರ ಎಸ್‌.ಚೌಹಾಣ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

2012-13ನೇ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿವಿ ಮಾನ್ಯತೆಯನ್ನು ಯುಜಿಸಿ ರದ್ದುಗೊಳಿಸಿತ್ತು. ಆದರೆ, ವಿವಿಯಿಂದ ಈ ಅಭ್ಯರ್ಥಿಗಳು 2014ರಲ್ಲಿ ಪದವಿ ಪಡೆದಿದ್ದಾರೆ. ಹೀಗಾಗಿ ಮಾನ್ಯತೆ ರದ್ದುಕೊಂಡ ವಿವಿಯ ಪದವಿ ಪರಿಗಣಿಸಲು ಕೆಪಿಎಸ್‌ಸಿ ನಿರಾಕರಿಸಿತ್ತು. ಹೀಗಾಗಿ ಅಲ್ಲಿ ಪದವಿ ಪಡೆದವರು ಕೆಎಎಸ್‌ ಪ್ರಾಥಮಿಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರೂ ಅಂತಿಮ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಆಯೋಗ ಅವಕಾಶ ನೀಡಿರಲಿಲ್ಲ.

ಇದನ್ನು ಪ್ರಶ್ನಿಸಿ ಪದವೀಧರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೆಎಎಸ್‌ ಪ್ರಾಥಮಿಕ ಪರೀಕ್ಷೆ ವೇಳೆ ಕಂಡು ಬರದ ನ್ಯೂನತೆಗಳು ಅಂತಿಮ ಪರೀಕ್ಷೆ ಸಂದರ್ಭದಲ್ಲಿ ಆಯೋಗಕ್ಕೆ ಕಂಡು ಬಂದಿದ್ದಕ್ಕೆ ಕಾರಣವೇನು ಎಂದು ಅರ್ಜಿದಾರರು ಪ್ರಶ್ನಿಸಿದ್ದರಲ್ಲದೆ, ಕೆಪಿಎಸ್‌ಸಿ ಉದ್ದೇಶಪೂರ್ವಕವಾಗಿ ನಮ್ಮನ್ನು ಪರೀಕ್ಷೆ ಬರೆಯದಂತೆ ತಡೆಯುತ್ತಿದೆ. ಆದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೆಪಿಎಸ್‌ಸಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

 

Trending videos

 
ಓದುಗರ ಅಭಿಪ್ರಾಯ
Back to Top